ಮಾಜಿ ಸಚಿವ ರೇವಣ್ಣ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು

Update: 2021-06-19 08:40 GMT

ಪುತ್ತೂರು, ಜೂ.19:  ಖಾಸಗಿ ನರ್ಸಿಂಗ್ ಹೋಂ​ಗಳ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್​ (ಐಎಂಎ) ಸದಸ್ಯ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಹಾಸನ‌ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ಸುಲಿಗೆ ನಡೆಯುತ್ತಿದೆ. ಕೋವಿಡ್ ಸಂದರ್ಭದಲ್ಲಿ ದಂಧೆ ನಡೆಸುತ್ತಿವೆ. ಸುಲಿಗೆಯನ್ನು ಆಸ್ಪತ್ರೆಗಳು ನಿಲ್ಲಿಸದಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ. ಆ ಮೂಲಕ ರೇವಣ್ಣ  ನರ್ಸಿಂಗ್ ಹೋಂಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News