ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ಬಿಎಸ್‍ವೈ ನೇಮಕಕ್ಕೆ ವರಿಷ್ಠರ ಚಿಂತನೆ

Update: 2021-06-19 11:26 GMT

ಬೆಂಗಳೂರು, ಜೂ. 19: ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ' ಚರ್ಚೆ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಸಚಿವರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬೆನ್ನಲ್ಲೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಂಧ್ರ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ.

ಆಂಧ್ರ ಪ್ರದೇಶದ ಹಾಲಿ ರಾಜ್ಯಪಾಲರ ಅವಧಿ ಜುಲೈ ತಿಂಗಳಿನಲ್ಲಿ ಅಂತ್ಯಗೊಳ್ಳುತ್ತಿದ್ದು, ತೆರವಾಗುವ ಆ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರನ್ನು ನೇಮಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದು ಪಕ್ಷದ ಮುಖಂಡರು ಮೇಲ್ಕಂಡ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿಯ ಉಸ್ತುವಾರಿ ಅರುಣ್ ಸಿಂಗ್ ಅವರು ಮೂರು ದಿನಗಳ ಸರಣಿ ಸಭೆಗಳನ್ನು ನಡೆಸಿ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ಹೊಸದಿಲ್ಲಿಗೆ ತೆರಳಿದ್ದಾರೆ. ಅಲ್ಲದೆ, ಶಾಸಕರ ಅಭಿಪ್ರಾಯವನ್ನು ಹೈಕಮಾಂಡ್‍ಗೆ ವರದಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೆ ಬಿಎಸ್‍ವೈ ಅವರನ್ನು ಆಂಧ್ರ ರಾಜ್ಯಪಾಲರನ್ನಾಗಿ ನೇಮಿಸಲಾಗುತ್ತದೆ ಎಂಬ ಮಾಹಿತಿ ಹೊರಬಿದ್ದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News