ಕೋವಿಡ್ ಲಾಕ್‌ಡೌನ್ ಸಂಪೂರ್ಣ ತೆಗೆಯಲು ತೆಲಂಗಾಣ ಸರಕಾರ ನಿರ್ಧಾರ

Update: 2021-06-19 10:39 GMT
ಸಾಂದರ್ಭಿಕ ಚಿತ್ರ

ಹೈದರಾಬಾದ್: ಕೊರೋನವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿರುವ ಲಕ್ಷಣಗಳನ್ನು ತೋರಿಸಿದ್ದರಿಂದ ತೆಲಂಗಾಣ ಸರಕಾರ ರಾಜ್ಯದಲ್ಲಿ  ಸಂಪೂರ್ಣವಾಗಿ ಲಾಕ್ ಡೌನ್ ತೆಗೆಯಲು ನಿರ್ಧರಿಸಿದೆ ಎಂದು NDTV  ವರದಿ ಮಾಡಿದೆ.

ಲಾಕ್ ಡೌನ್ ಸಮಯದಲ್ಲಿ ವಿಧಿಸಲಾದ ಎಲ್ಲಾ ರೀತಿಯ ನಿಯಮಗಳನ್ನು ಪೂರ್ಣ ಪ್ರಮಾಣದಲ್ಲಿ ತೆಗೆದುಹಾಕಲು ಎಲ್ಲಾ ಶಾಖೆಗಳಿಗೆ ಸರಕಾರ ಆದೇಶಿಸಿದೆ.

"ಲಾಕ್ ಡೌನ್ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ರಾಜ್ಯ ಸಂಪುಟ ನಿರ್ಧರಿಸಿದೆ. ಕೊರೋನ ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ಶೇಕಡಾವಾರು ಗಮನಾರ್ಹವಾಗಿ ಕಡಿಮೆಯಾಗಿದೆ. ಕೊರೋನ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದು ವೈದ್ಯಕೀಯ ಅಧಿಕಾರಿಗಳು ನೀಡಿದ ವರದಿಗಳನ್ನು ಪರಿಶೀಲಿಸುವ ಮೂಲಕ ಲಾಕ್ ಡೌನ್ ಅನ್ನು ತೆಗೆದುಹಾಕಲು ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ಮುಖ್ಯಮಂತ್ರಿ ಕಚೇರಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News