ಪ್ರಧಾನಿ ಮೋದಿಯವರ ಆಪ್ತ, ಎ.ಕೆ.ಶರ್ಮಾ ಉತ್ತರಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ

Update: 2021-06-19 11:39 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ  ಆಪ್ತರಾಗಿರುವ ಮಾಜಿ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಅವರನ್ನು ಬಿಜೆಪಿಯ ಉತ್ತರ ಪ್ರದೇಶ ಘಟಕದ ಉಪಾಧ್ಯಕ್ಷರನ್ನಾಗಿ ಶನಿವಾರ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.

ಮುಂದಿನ ವರ್ಷ ನಡೆಯಲಿರುವ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಮುನ್ನ ಉತ್ತರಪ್ರದೇಶ ಬಿಜೆಪಿಯೊಳಗಿನ ಭಿನ್ನಾಭಿಪ್ರಾಯದ ಭುಗಿಲೆದ್ದಿದೆ ಎಂದು ಸುದ್ದಿಯ ಮಧ್ಯೆ ಈ ನೇಮಕಾತಿ ಆಗಿದೆ.

ಎಂಎಲ್‌ಸಿ ಹಾಗೂ  ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಶರ್ಮಾ ಅವರನ್ನು ಉತ್ತರಪ್ರದೇಶದ ಸರಕಾರದಲ್ಲಿ ಮಂತ್ರಿಯನ್ನಾಗಿ ಮಾಡಲಾಗುತ್ತದೆ ಎಂದು  ಕಳೆದ ಕೆಲವು ಸಮಯದಿಂದ ವದಂತಿ ಕೇಳಿಬರುತ್ತಿದ್ದವು. ಕೋವಿಡ್-19 ವಿರುದ್ಧದ ಹೋರಾಟದ ಮೇಲ್ವಿಚಾರಣೆಗೆ ಶರ್ಮಾ ಅವರನ್ನು ಈ ವರ್ಷದ ಆರಂಭದಲ್ಲಿ ಪ್ರಧಾನಿ ಮೋದಿಯವರ ಲೋಕಸಭಾ ಕ್ಷೇತ್ರ ವಾರಣಾಸಿಗೆ ಕಳುಹಿಸಿಕೊಡಲಾಗಿತ್ತು.

ಈ ವರ್ಷದ ಆರಂಭದಲ್ಲಿ1988 ರ ಬ್ಯಾಚಿನ ಐಎಎಸ್ ಅಧಿಕಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು.

ಮೋದಿ ಅವರು ಅಕ್ಟೋಬರ್ 2001 ರಲ್ಲಿ ಗುಜರಾತ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ ಶರ್ಮಾ ಅವರು ಮೋದಿಯವರ  ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News