ಸಕಲ ಸರಕಾರಿ ಗೌರವಗಳೊಂದಿಗೆ ಸಂಜೆ ನೆರವೇರಲಿರುವ ಮಿಲ್ಖಾ ಸಿಂಗ್ ಅಂತ್ಯಕ್ರಿಯೆ

Update: 2021-06-19 11:20 GMT

ಚಂಡೀಗಢ : ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ನಿಧನರಾದ ಫ್ಲೈಯಿಂಗ್ ಸಿಖ್ ಎಂದೇ ಖ್ಯಾತಿ ಪಡೆದಿದ್ದ ಭಾರತದ ಕ್ರೀಡಾ ತಾರೆ, ಮಿಲ್ಖಾ ಸಿಂಗ್ ಅವರ ಅಂತ್ಯಸಂಸ್ಕಾರ ಇಂದು ಸಂಜೆ 5 ಗಂಟೆಗೆ ಸಕಲ ಸರಕಾರಿ ಗೌರವಗಳೊಂದಿಗೆ  ನೆರವೇರಲಿದೆ.

ಮಿಲ್ಖಾ ಸಿಂಗ್ ಅವರ ಗೌರವಾರ್ಥ ಪಂಜಾಬ್ ಸರಕಾರ ಒಂದು ದಿನದ ಶೋಕಾಚರಣೆ ನಡೆಸಲಿದೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.

ತೊಂಬತ್ತೊಂದು ವರ್ಷದ ಸಿಂಗ್ ಶುಕ್ರವಾರ ರಾತ್ರಿ ನಿಧನರಾದರು. ಅವರು ಕಳೆದೊಂದು ತಿಂಗಳಿನಿಂದ ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರ ಪತ್ನಿ, ಮಾಜಿ ರಾಷ್ಟ್ರೀಯ ವಾಲಿಬಾಲ್ ಕ್ಯಾಪ್ಟನ್ ಆಗಿದ್ದ ನಿರ್ಮಲ್ ಕೌರ್ ಕೂಡ ಕೋವಿಡ್‍ಗೆ ಬಲಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News