ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಭೋಜನ ವಿರಾಮಕ್ಕೆ ಭಾರತ 69/2

Update: 2021-06-19 12:02 GMT

ಸೌತಾಂಪ್ಟನ್: ನ್ಯೂಝಿಲ್ಯಾಂಡ್ ವಿರುದ್ಧ ಶನಿವಾರ ಇಲ್ಲಿ ಆರಂಭವಾಗಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಅವಕಾಶ ಪಡೆದಿರುವ ಭಾರತವು ಭೋಜನ ವಿರಾಮದ ವೇಳೆ 28 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದೆ.

ಭಾರತದ ಪರ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಮೊದಲ ವಿಕೆಟ್ ಗೆ 62 ರನ್ ಜೊತೆಯಾಟ ನಡೆಸಿ ಉತ್ತಮ ಆರಂಭ ನೀಡಿದ್ದರು. ಆದರೆ ಇಬ್ಬರೂ ಬೆನ್ನುಬೆನ್ನಿಗೆ ವಿಕೆಟ್ ಒಪ್ಪಿಸಿದರು.

ರೋಹಿತ್ 34 ರನ್(68 ಎಸೆತ, 6 ಬೌಂಡರಿ) ಹಾಗೂ ಗಿಲ್ 28 ರನ್( 64 ಎಸೆತ, 3 ಬೌಂಡರಿ)ಗಳಿಸಿ ಔಟಾದರು.  ಲಂಚ್ ವಿರಾಮದ ವೇಳೆಗೆ ಚೇತೇಶ್ವರ ಪೂಜಾರ(0) ಹಾಗೂ ನಾಯಕ ವಿರಾಟ್ ಕೊಹ್ಲಿ(6) ಕ್ರೀಸ್ ಕಾಯ್ದುಕೊಂಡಿದ್ದರು.

ಎರಡನೇ ದಿನವಾದ ಶನಿವಾರ ಟಾಸ್ ಜಯಿಸಿದ ನ್ಯೂಝಿಲ್ಯಾಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಶುಕ್ರವಾರ ಮೊದಲ ದಿನದಾಟ ಭಾರೀ ಮಳೆಯಿಂದಾಗಿ ರದ್ದಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News