ರಾಜ್ಯ ಸರ್ಕಾರದ ಸೂಚನೆ ಬಳಿಕ ದ.ಕ.ಜಿಲ್ಲೆಯಲ್ಲಿ ಲಾಕ್‌ಡೌನ್ ತೆರವು ಕುರಿತು ನಿರ್ಧಾರ: ಡಿಸಿ ಡಾ. ರಾಜೇಂದ್ರ

Update: 2021-06-19 13:31 GMT
ಡಾ.ಕೆ.ವಿ. ರಾಜೇಂದ್ರ

ಮಂಗಳೂರು, ಜೂ.19: ದ.ಕ. ಜಿಲ್ಲೆಯಲ್ಲಿ ಅನ್‌ಲಾಕ್ ಮಾಡುವ ಕುರಿತು ರಾಜ್ಯ ಸರಕಾರ ತೀರ್ಮಾನ ಪ್ರಕಟಿಸಿದ ಬಳಿಕ ಜಿಲ್ಲಾಡಳಿತ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಶನಿವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂ.21ರ ಬಳಿಕ ಅನ್‌ಲಾಕ್ ಮಾಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ರಾಜ್ಯ ಸರಕಾರದ ಹಂತದಲ್ಲಿ ತೀರ್ಮಾನವಾಗಬೇಕಾಗಿದೆ. ಜಿಲ್ಲೆಯಲ್ಲಿ ಯಾವ ರೀತಿಯಲ್ಲಿ ಮುಂದಿನ ಅನ್‌ಲಾಕ್ ಮಾಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಮುಖ್ಯಮಂತ್ರಿಯ ಜೊತೆ ಸಮಾಲೋಚನೆ ಮಾಡಲಾಗಿದೆ ಎಂದರು.

ಜಿಲ್ಲೆಯ ಎಲ್ಲಾ ಧಾರ್ಮಿಕ ಕ್ಷೇತ್ರಗಳನ್ನು ಮುಂದಿನ 2 ವಾರ ತೆರೆಯುವಂತಿಲ್ಲ. ಈ ಕುರಿತು ಈಗಾಗಲೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಈಗಾಗಲೆ ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಆಗಮಿಸುವ ವಾಹನಗಳನ್ನು ಮುಟ್ಟುಗೋಲು ಹಾಕಲು ಸೂಚನೆ ನೀಡಲಾಗಿದೆ. ಅಲ್ಲದೆ ಚಾರ್ಮಾಡಿ ಮತ್ತು ಪೆರಿಯಶಾಂತಿ ಎಂಬಲ್ಲಿ ಹೆಚ್ಚುವರಿ ಚೆಕ್‌ಪೋಸ್ಟ್ ಮೂಲಕ ತಪಾಸಣೆಗೆ ಪೊಲೀಸ್ ಇಲಾಖೆಗೆ ನಿದೇರ್ಶನ ನೀಡಲಾಗಿದೆ. ಈಗಾಗಲೆ ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತರ ಭೇಟಿಯ ಕುರಿತು ದೂರಿನ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News