ಎಂಆರ್‌ಪಿಎಲ್ ವಿಶೇಷ ರಸ್ತೆ ಬಳಕೆಗೆ ಆಗ್ರಹ

Update: 2021-06-19 14:52 GMT

ಮಂಗಳೂರು, ಜೂ.19: ಮರವೂರು ಸೇತುವೆ ಕುಸಿತಗೊಂಡ ಹಿನ್ನಲೆಯಲ್ಲಿ ಪರ್ಯಾಯ ರಸ್ತೆಯಾಗಿ ಎಂಆರ್‌ಪಿಎಲ್ ವಿಶೇಷ ರಸ್ತೆಯನ್ನು ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಮಾಜಿ ಸಚಿವರಾದ ಯು.ಟಿ.ಖಾದರ್ ಮತ್ತು ಅಭಯಚಂದ್ರ ಜೈನ್ ದ.ಕ. ಜಿಲ್ಲಾಧಿಕಾರಿಯನ್ನು ಆಗ್ರಹಿಸಿದ್ದಾರೆ.

ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಸಹಿತ ಕಟೀಲು ದೇವಸ್ಥಾನ, ಕಿನ್ನಿಗೋಳಿ ಮತ್ತಿತರ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತಗೊಂಡ ಬಳಿಕ ಬದಲಿ ಸಂಚಾರಕ್ಕಾಗಿ ನೀಡಿದ ಕಾವೂರು-ಕೂಳೂರು-ಕೆಬಿಎಸ್-ಜೋಕಟ್ಟೆ-ಪೊರ್ಕೋಡಿ-ಬಜ್ಪೆಅಥವಾ ಪಚ್ಚನಾಡಿ-ಗುರುಪುರ-ಕೈಕಂಬ-ಬಜ್ಪೆರಸ್ಥೆಯು ತೀರಾ ಕಿರಿದಾಗಿದೆ. ಅಲ್ಲದೆ ಜೋಕಟ್ಟೆಯಲ್ಲಿ ರೈಲ್ವೇ ಗೇಟ್ ದಾಟಬೇಕಾಗಿದೆ. ಇದರಿಂದ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಪರ್ಯಾಯ ರಸ್ತೆಯಾಗಿ ಎಂಆರ್‌ಪಿಎಲ್ ಕೂಳೂರು-ಕಳವಾರು-ಬಜ್ಪೆ ಸಾರ್ವಜನಿಕರಿಗೆ ಮುಕ್ತಗೊಳಿಸುವ ಬಗ್ಗೆ ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News