ಜೂ. 21ಕ್ಕೆ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

Update: 2021-06-19 15:09 GMT

ಉಡುಪಿ, ಜೂ.19: ಕೋವಿಡ್-19ರ ಎರಡನೇ ಅಲೆಯ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ, ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಆಹಾರ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮ ಜೂ.21ರ ಸೋಮವಾರ ಸಂಜೆ 4 ಗಂಟೆಗೆ ಉಡುಪಿಯ ಮಾಂಡವಿ ಟೈಮ್ ಸ್ಕ್ವೇರ್, ರಾಯಲ್ ಗಾರ್ಡನ್, ಕಲ್ಸಂಕ ಇಲ್ಲಿನ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಡೆಯಲಿದೆ.

ಕೋವಿಡ್-19ರ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News