ಕಾರ್ಮಿಕರಿಗೆ ಕೋವಿಡ್ ಪರಿಹಾರ

Update: 2021-06-19 15:12 GMT

ಉಡುಪಿ, ಜೂ.19: ಕೋವಿಡ್-19ರ ಲಾಕ್‌ಡೌನ್ ಕಾರಣ ಸಂಕಷ್ಟ ಕ್ಕೊಳಗಾದ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ 2,000ರೂ.ಗಳ ಒಂದು ಬಾರಿಯ ನೆರವು ನೀಡಲಾಗುತ್ತಿದ್ದು, ಯೋಜನೆಯ ಕುರಿತು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಬಗ್ಗೆ ಮಾರ್ಗದರ್ಶನಕ್ಕೆ ಹಾಗೂ ಅರ್ಜಿ ಸಲ್ಲಿಸಲು ಗ್ರಾಪಂ ವ್ಯಾಪ್ತಿಯ ಸೇವಾ ಕೇಂದ್ರಗಳು /ವಾರ್ಡ್‌ಮಟ್ಟದ ಸೇವಾ ಕೇಂದ್ರಗಳು/ಸಾಮಾನ್ಯ ಸೇವಾ ಕೇಂದ್ರಗಳು/ ಕಾರ್ಮಿಕ ಸೇವಾ ಕೇಂದ್ರಗಳನ್ನು ಅಥವಾ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರು 2,000ರೂ.ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ ಪಡೆಯಲು ಈ ವರ್ಗಗಳ 18ರಿಂದ 65 ವಯೋ ಮಾನದ, ಬಿಪಿಎಲ್ ಕುಟುಂಬದ, ಓರ್ವ ಫಲಾನುಭವಿ ಮಾತ್ರ ಅರ್ಹ ರಾಗಿದ್ದು, ಅವರು ಆಧಾರ್‌ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕಾಗಿದ್ದು, ನಿಗದಿತ ವೃತ್ತಿ ನಿರ್ವಹಿಸುತ್ತಿರುವ ಕುರಿತು ಅಧಿಕಾರಿ ಗಳಿಂದ ಪಡೆದ ಉದ್ಯೋಗ ದೃಢೀಕರಣ ಪ್ರಮಾಣಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ https://sevasindhu.karnataka.gov.in/ ಪೋರ್ಟಲ್‌ನಲ್ಲಿ ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News