ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ಮಾ) ಯೋಜನೆ

Update: 2021-06-19 15:16 GMT

ಉಡುಪಿ, ಜೂ.19: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಪಂ ಮಟ್ಟಕ್ಕೆ ಬೆಳೆ ವಿಮೆ ಯೋಜನೆ ಯಡಿ ನೋಂದಣಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಮುಂಗಾರು ಹಂಗಾಮಿನ ಅಧಿಸೂಚಿತ ಬೆಳೆಯ ವಿವರ: ಅಧಿಸೂಚಿತ ಬೆಳೆ ಭತ್ತ (ಮಳೆಯಾಶ್ರಿತ), ಉಡುಪಿ ಜಿಲ್ಲೆಯ ಎಲ್ಲಾ ಗ್ರಾಪಂಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳು ಅಧಿಸೂಚಿತ ಘಟಕಗಳಾಗಿದ್ದು, ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ ರೂ. 55,000. ವಿಮಾ ಕಂತಿನ ದರ ಪ್ರತಿ ಹೆಕ್ಟೇರ್‌ಗೆ ರೂ 1,100(ಶೇ.2)ಆಗಿರುತ್ತದೆ.

 ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ/ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಬಹುದು.

ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಜುಲೈ 24ಕ್ಕಿಂತ ಮೊದಲು ಈ ಕುರಿತು ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡಲು ಕೋರಬಹುದು. ಹೆಚ್ಚಿನ ಮಾಹಿತಿ ಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿದೇರ್ಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News