ಮಾಣಿ: ರಸ್ತೆ ಬದಿಗೆ ಉರುಳಿದ ಲಾರಿ

Update: 2021-06-19 15:30 GMT

ಬಂಟ್ವಾಳ, ಜೂ.19: ಚಾಲಕನ ನಿಯಂತ್ರಣ ತಪ್ಪಿದ ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಶನಿವಾರ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡು ತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ.

ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News