ಹಾಸನ; ಲಾರಿ- ಕಾರು ನಡುವೆ ಭೀಕರ ಅಪಘಾತ: ಬೆಳ್ತಂಗಡಿಯ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Update: 2021-06-19 16:27 GMT

ಹಾಸನ, ಜೂ.19: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ಗಣಪ ಗೌಡ ಎಂಬವರ ಮಕ್ಕಳಾದ ಜಯಪ್ರಕಾಶ್(25) ಯೋಗಿಶ್(23) ಮೃತಪಟ್ಟವರು. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕೆಂಚಟ್ಟಹಳ್ಳಿ ಬಳಿ ಹೋಗುತ್ತಿದ್ದಾಗ ಕಾರಿನ ಮುಂದೆ ಇದ್ದ ಲಾರಿ ದಿಢೀರ್ ಬ್ರೇಕ್ ಹಾಕಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಕಾರು ಲಾರಿಗೆ ಢಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News