​ಜೂ. 21: ಕೋವಿಡ್ ಲಸಿಕಾ ಶಿಬಿರ

Update: 2021-06-19 17:07 GMT

ಮಂಗಳೂರು, ಜೂ.19: ದ.ಕ.ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂತರ್‌ರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಕೋವಿಡ್ ಲಸಿಕಾ ಶಿಬಿರವನ್ನು ಜೂ.21ರಂದು ಬೆಳಗ್ಗೆ 9:30ಕ್ಕೆ ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಲಸಿಕೆ ಪಡೆಯಲು ಇಚ್ಚಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಕ್ರೀಡಾ ಸಾಧನೆಯ ಪ್ರಮಾಣಪತ್ರದೊಂದಿಗೆ ಬೆಳಗ್ಗೆ 9:30ರೊಳಗೆ ಹಾಜರಿರುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News