ಹಡೀಲು ಗದ್ದೆಯಲ್ಲಿ ಭತ್ತದ ಬೇಸಾಯ: ಗದ್ದೆಗಿಳಿದು ಟ್ರ್ಯಾಕ್ಟರ್ ಚಲಾಯಿಸಿದ ಶಾಸಕ ಮಠಂದೂರು

Update: 2021-06-20 06:59 GMT

ಪುತ್ತೂರು, ಜೂ.20: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ನೇತೃತ್ವದಲ್ಲಿ ಹಡಿಲು ಗದ್ದೆಯಲ್ಲಿ ಬೇಸಾಯ ಮಾಡುವ ನಿಟ್ಟಿನಲ್ಲಿ ಕುರಿಯ ಗ್ರಾಮದಲ್ಲಿರುವ ಮುಳಿಯ ಶ್ಯಾಮ ಭಟ್ ಎಂಬವರ ಗದ್ದೆಯಲ್ಲಿ ಭತ್ತದ ಬೇಸಾಯಕ್ಕೆ ರವಿವಾರ ಚಾಲನೆ ನೀಡಲಾಯಿತು.

ಶಾಸಕ ಸಂಜೀವ ಮಠಂದೂರು ಗದ್ದೆಯಲ್ಲಿ ತೆಂಗಿನ ಕಾಯಿ ಒಡೆದು ಬಳಿಕ ಟ್ರ್ಯಾಕ್ಟರ್ ಮೂಲಕ ಸ್ವತಃ ಗದ್ದೆ ಉಲುಮೆ ಮಾಡುವ ಮೂಲಕ ಭತ್ತದ ಬೇಸಾಯಕ್ಕೆ ಚಾಲನೆ ನೀಡಿದರು.

 ಈ ಸಂದರ್ಭದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ರಾಮದಾಸ್ ಗೌಡ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ವೀಣಾ ಬಿ.ಕೆ., ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು, ತಾಪಂ ನಿಕಟಪೂರ್ವ ಸದಸ್ಯ ಶಿವರಂಜನ್, ರೋಟರಿ ಪುತ್ತೂರು ಪೂರ್ವ ಅಧ್ಯಕ್ಷ ಕೃಷ್ಣನಾರಾಯಣ ಮುಳಿಯ, ಶ್ರೀ.ಕ್ಷೇ.ಧ.ಗ್ರಾ.ಯೋ ಕೃಷಿ ನಿರ್ದೇಶಕ ಮಹೇಶ್ ಹಾಗೂ ಮುಳಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

ಪುತ್ತೂರು ತಾಲೂಕಿನಲ್ಲಿ ಭತ್ತದ ಬೇಸಾಯದ ವಿಸ್ತೀರ್ಣವನ್ನು ಹೆಚ್ಚು ಮಾಡುವ ಮೂಲಕ ಭತ್ತ ಬೇಸಾಯಕ್ಕೆ ಪ್ರೇರಣೆ ನೀಡುವ ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಹಮ್ಮಿಕೊಂಡಿದ್ದಾರೆ. ಇದರ ಅನ್ವಯ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ದೇವಾಲಯದ ಗದ್ದೆಗಳು ಮತ್ತು ಖಾಸಗಿ ಗದ್ದೆಗಳಲ್ಲಿ ಭತ್ತ ಬೇಸಾಯದ ಕುರಿತಂತೆ ಕೃಷಿ ಜಾಗೃತಿ ಮಾಡಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News