ದ.ಕ. ಜಿಲ್ಲೆ: ಕೋವಿಡ್‌ಗೆ 11 ಬಲಿ; 525 ಮಂದಿಗೆ ಕೊರೋನ ಪಾಸಿಟಿವ್

Update: 2021-06-20 15:07 GMT

ಮಂಗಳೂರು, ಜೂ.20: ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ರವಿವಾರ ಮತ್ತೆ 11 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ರವಿವಾರ 11 ಮಂದಿ ಮೃತಪಡುವುದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,051ಕ್ಕೇರಿದೆ. ಅಲ್ಲದೆ ರವಿವಾರ ಜಿಲ್ಲೆಯಲ್ಲಿ 525 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.4.95 ಇದೆ. ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 88,707ಕ್ಕೇರಿದೆ.

ರವಿವಾರ 583 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 80,530ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,126 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 9,64,157 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 8,65,372 ಮಂದಿಯ ವರದಿ ನೆಗೆಟಿವ್ ಬಂದಿದೆ.

ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 71,846 ಮಂದಿಯಿಂದ 86,93,217 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News