​ಜೂ.21: ದ.ಕ. ಜಿಲ್ಲಾದ್ಯಂತ ಲಸಿಕಾ ಮೇಳ

Update: 2021-06-20 15:50 GMT

ಮಂಗಳೂರು, ಜೂ.20: ದ.ಕ.ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್-19ಲಸಿಕಾ ಮೇಳವು ಜೂ.21ರಂದು ನಡೆಯಲಿದೆ.

45 ವರ್ಷ ಪ್ರಾಯ ಮೇಲ್ಪಟ್ಟವರಿಗೆ ಮೊದಲ ಆದ್ಯತೆ ಮೇರೆಗೆ ಕೋವಿಶೀಲ್ಡ್ ಲಸಿಕೆ ನೀಡಲಾಗುವುದು. ಕೋವಿಶೀಲ್ಡ್ 2ನೆ ಡೋಸ್‌ಗೆ ಬಾಕಿ ಇರುವ ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗುವುದು.

18ರಿಂದ 44 ವರ್ಷ ಪ್ರಾಯದೊಳಗಿನವರಲ್ಲಿ ರಾಜ್ಯ ಸರಕಾರ ಗುರುತಿಸಿದ ಆದ್ಯತಾ ಗುಂಪಿನ ಫಲಾನುಭವಿಗಳಿಗೆ ಮತ್ತು ಕೊರೋನ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು.

ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಹಾಗೂ ದ್ವಿತೀಯ ಡೋಸ್ ಅಲ್ಲದೆ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದೆ. ಮಂಗಳೂರು ತಾಲೂಕಿನ 10ನಗರ ಆರೋಗ್ಯ ಕೇಂದ್ರಗಳಲ್ಲಿ, ಬಂಟ್ವಾಳ ನಗರ, ಪುತ್ತೂರು ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಂಡು ಅಪಾಯಿಂಟ್‌ಮೆಂಟ್ ಶೆಡ್ಯೂಲ್ ಪಡೆದುಕೊಂಡವರು ಮಾತ್ರ ಲಸಿಕಾ ಶಿಬಿರಕ್ಕೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News