ರಾಜ್ಯದೆಲ್ಲೆಡೆ ಮುಂಗಾರು ಚುರುಕು: ದಕ್ಷಿಣ ಕನ್ನಡ, ಉಡುಪಿ ಸೇರಿ ಕೆಲ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Update: 2021-06-20 15:57 GMT

ಬೆಂಗಳೂರು, ಜೂ. 20: ರಾಜ್ಯದೆಲ್ಲೆಡೆ ಮುಂಗಾರು ಚುರುಕುಗೊಂಡಿದ್ದು, ಇಂದಿನಿಂದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ವಿವಿಧ ಜಿಲ್ಲೆಗಳಲ್ಲಿ ಚುರುಕುಗೊಂಡಿದ್ದು, ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ರಾಜ್ಯದ ವಿವಿಧ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಕೆಲವು ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿವೆ. ಪ್ರಮುಖವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾವೇರಿ, ಬೆಳಗಾವಿ, ಧಾರವಾಡಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರ್ಗಿ, ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

ಇನ್ನು, ರಾಜ್ಯದ 1,710 ಗ್ರಾಮಗಳು ಪ್ರವಾಹದ ಭೀತಿಯಲ್ಲಿವೆ. ಈ ಗ್ರಾಮಗಳತ್ತ ಹೆಚ್ಚಿನ ನಿಗಾ ವಹಿಸಲು ಸರಕಾರ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News