ಕೋವಿಡ್19: ರಾಜ್ಯದಲ್ಲಿಂದು 4,517 ಮಂದಿಗೆ ಪಾಸಿಟಿವ್, 120 ಸೋಂಕಿತರು ಮೃತ್ಯು

Update: 2021-06-20 16:13 GMT

ಬೆಂಗಳೂರು, ಜೂ. 20: ರಾಜ್ಯದಲ್ಲಿ ರವಿವಾರ 4,517 ಪ್ರಕರಣಗಳು ದಾಖಲಾಗಿದ್ದು, 120 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವೆಗೂ ಒಟ್ಟು 28,06,453 ಸೋಂಕಿನ ಪ್ರಕರಣಗಳು ದಾಖಲಾಗಿದ್ದು, 33,883 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ 1,26,813 ಸಕ್ರಿಯ ಪ್ರಕರಣಗಳಿದ್ದು, ಅವರೆಲ್ಲರೂ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

120 ಮಂದಿ ಸಾವು: ಬಾಗಲಕೋಟೆ 1, ಬಳ್ಳಾರಿ 12, ಬೆಳಗಾವಿ 1, ಬೆಂಗಳೂರು ನಗರ 12, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 11, ದಾವಣಗೆರೆ 7, ಧಾರವಾಡ 11, ಗದಗ 1, ಹಾಸನ 5, ಹಾವೇರಿ 5,  ಕೊಡಗು 1, ಕೋಲಾರ 4, ಕೊಪ್ಪಳ 1, ಮಂಡ್ಯ 8, ಮೈಸೂರು 17, ರಾಯಚೂರು 1, ಶಿವಮೊಗ್ಗ 5, ತುಮಕೂರು 2, ಉಡುಪಿ 1, ಉತ್ತರಕನ್ನಡ 5, ವಿಜಯಪುರ 1  ಸಾವಿನ ಪ್ರಕರಣಗಳು ವರದಿಯಾಗಿದೆ.

ಸೋಂಕು ಪ್ರಕರಣಗಳು: ರಾಜ್ಯದಲ್ಲಿ ರವಿವಾರ  4,517 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 10, ಬಳ್ಳಾರಿ 67, ಬೆಳಗಾವಿ 201, ಬೆಂಗಳೂರು ಗ್ರಾಮಾಂತರ 111, ಬೆಂಗಳೂರು ನಗರ 933, ಬೀದರ್ 6, ಚಾಮರಾಜನಗರ 61, ಚಿಕ್ಕಬಳ್ಳಾಪುರ 123, ಚಿಕ್ಕಮಗಳೂರು 183, ಚಿತ್ರದುರ್ಗ 74, ದಕ್ಷಿಣಕನ್ನಡ 525, ದಾವಣಗೆರೆ 136, ಧಾರವಾಡ 77, ಗದಗ 28, ಹಾಸನ 346, ಹಾವೇರಿ 24, ಕಲಬುರಗಿ 9, ಕೊಡಗು 137, ಕೋಲಾರ 77, ಕೊಪ್ಪಳ 61, ಮಂಡ್ಯ 131, ಮೈಸೂರು 545, ರಾಯಚೂರು 19, ರಾಮನಗರ 12, ಶಿವಮೊಗ್ಗ 141, ತುಮಕೂರು 144, ಉಡುಪಿ 167, ಉತ್ತರಕನ್ನಡ 146, ವಿಜಯಪುರ 7, ಯಾದಗಿರಿಜಿಲ್ಲೆ 16  ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 12 ಮಂದಿ ಸಾವು

ರಾಜಧಾನಿ ಬೆಂಗಳೂರಿನಲ್ಲಿ ರವಿವಾರ 933 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 12 ಸೋಂಕಿತರು ಮೃತಪಟ್ಟಿದ್ದಾರೆ. ಹಾಗೂ 1,902ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ನಗರದಲ್ಲಿ 15,445ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಂದು ಸೇರಿ ಒಟ್ಟು 71,282 ಸಕ್ರಿಯ ಪ್ರಕರಣಗಳಿದ್ದು, ಅವರೆಲ್ಲರೂ ಕೋವಿಡ್ ನಿಗದಿತ ಆಸ್ಪತ್ರೆಗಳು, ಆರೈಕೆಕೇಂದ್ರ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News