ಫರಂಗಿಪೇಟೆಯಲ್ಲಿ ಎಸ್ಡಿಪಿಐ ಸಂಸ್ಥಾಪನಾ ದಿನಾಚರಣೆ

Update: 2021-06-21 12:00 GMT

ಫರಂಗಿಪೇಟೆ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುದು ಗ್ರಾಮ ಸಮಿತಿ ವತಿಯಿಂದ ಪಕ್ಷದ 12ನೇ ವರ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು.

ದ್ವಜಾರೋಹಣವನ್ನು ಪುದು ಗ್ರಾಮ ಪಂಚಾಯತ್ ಸದಸ್ಯ ನಝೀರ್ ಕುಂಜತ್ಕಳ ನೆರವೇರಿಸಿದರು 

ಎಸ್ಡಿಪಿಐ ಜಿಲ್ಲಾ ಮುಖಂಡರಾದ ಅಕ್ಬರ್ ಅಲಿ ಪೊನ್ನೋಡಿ ಮಾತನಾಡಿ ನಮ್ಮ ಪೂರ್ವಿಕರ ತ್ಯಾಗ ಬಲಿದಾನಕ್ಕೆ ಪ್ರತಿಫಲವಾಗಿ ಜಗತ್ತಿನಲ್ಲಿಯೇ ಶ್ರೇಷ್ಠವಾದ ಪ್ರಜಾಪ್ರಭುತ್ವ ಅಸ್ಥಿತ್ವಕ್ಕೆ ಬಂದಿದೆ ಅವರ ಬಲಿದಾನ ವ್ಯರ್ಥವಾಗ ದಂತೆ  ಪ್ರಜಾಪ್ರಭುತ್ವವನ್ನು ಉಳಿಸಿ ಬೆಳೆಸುವ ಹೋರಾಟ ನಮ್ಮದಾಗಬೇಕು ಈ ನಿಟ್ಟಿನಲ್ಲಿ ಎಸ್ಡಿಪಿಐ ಪಕ್ಷ ಒಂದು ದಶದಿಂದೀಚೆಕೆ ಸಾಮಾಜಿಕ ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದೆ ಎಂದು ಹೇಳಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಪುದು ಗ್ರಾಮ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಅಮ್ಮೆಮಾರ್ ವಹಿಸಿದರು.

ಪ್ರಾಸ್ತಾವಿಕ ನುಡಿಗಳೊಂದಿಗೆ  ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಕಾದರ್ ಫರಂಗಿಪೇಟೆ ಸ್ವಾಗತಿಸಿದರು
ಕ್ಷೇತ್ರ ಸಮಿತಿ ಉಪಾಧ್ಯಕ್ಷ ಸುಲೈಮಾನ್ ಉಸ್ತಾದ್ ವಲಯ ಸಮಿತಿ ಸದಸ್ಯ ಬಶೀರ್ ಅಮೆಮ್ಮಾರ್ ಪಾಪ್ಯುಲರ್ ಫ್ರಂಟ್ ಬ್ಲಡ್ಡ್ ಡೋನರ್ಸ್ ಫೋರಮ್ ಪುದು ಅಧ್ಯಕ್ಷ ರವೂಫ್ ಪೇರಿಮಾರ್, ಗ್ರಾಮ ಸಮಿತಿ ಉಪಾಧ್ಯಕ್ಷ ಅಬ್ಬಾಸ್ ಪೇರಿಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಅಶ್ರಫ್ ಮಾರಿಪ್ಪಳ್ಳ ನಿರೂಪಿಸಿ, ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News