ಜೂ.22ರಿಂದ ಆಂಧ್ರಪ್ರದೇಶ, ತೆಲಂಗಾಣಕ್ಕೆ ಬಸ್‍ ಸಂಚಾರ ಪುನರಾರಂಭ

Update: 2021-06-21 16:42 GMT

ಬೆಂಗಳೂರು, ಜೂ.21: ರಾಜ್ಯದಲ್ಲಿ ಕೋವಿಡ್ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂ.22ರಿಂದ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಸಾರಿಗೆಗಳ ಕಾರ್ಯಾಚರಣೆ ಪುನರಾರಂಭಿಸಲಾಗುತ್ತಿದೆ ಎಂದು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಸಾರಿಗೆಗಳ ಕಾರ್ಯಾಚರಣೆ ಆರಂಭಗೊಳ್ಳಲಿದೆ.

ಆಂಧ್ರಪ್ರದೇಶ ರಾಜ್ಯಕ್ಕೆ ಬೆಳಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯೊಳಗೆ ತಲುಪುವಂತೆ undefined ಸಾರಿಗೆಗಳ ಕಾರ್ಯಾಚರಣೆ  ಮಾಡಲಾಗುವುದು. ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿರುತ್ತದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಲು ಕೋರಲಾಗಿದೆ.

ಮುಂಗಡ ಆಸನಗಳನ್ನು ksrtc.karnataka.gov.in/www.ksrtc.in ವೆಬ್‍ಸೈಟ್ ಮತ್ತು ನಿಗಮದ, ಫ್ರಾಂಚೈಸಿ ಕೌಂಟರ್ ಗಳ ಮುಖಾಂತರ ಕಾಯ್ದಿರಿಸಿಕೊಳ್ಳಬಹುದಾಗಿದೆ. ಪ್ರಯಾಣಿಕರು ಸದರಿ ಸೌಲಭ್ಯ ಸದುಪಯೋಗ ಪಡೆಯಲು ಕೋರಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.080-26252625ಕ್ಕೆ ಸಂಪರ್ಕಿಸಲು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News