ಚುನಾವಣೋತ್ತರ ಹಿಂಸಾಚಾರ: ಪ.ಬಂಗಾಳ ಸರಕಾರದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Update: 2021-06-21 17:47 GMT

ಕೋಲ್ಕತಾ, ಜೂ.21: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ಮಾನವಹಕ್ಕು ಆಯೋಗ(ಎನ್‌ಎಚ್‌ಆರ್‌ಸಿ)ಗೆ ವಹಿಸುವ ನಿರ್ಧಾರದ ರದ್ಧತಿ ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ.

ಈ ಹಿಂಸಾಚಾರದಲ್ಲಿ ಮಾನವಹಕ್ಕಿನ ಉಲ್ಲಂಘನೆಯಾಗಿರುವುದರಿಂದ ಪ್ರಕರಣದ ತನಿಖೆಯನ್ನು ಎನ್‌ಎಚ್‌ಆರ್‌ಸಿಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ತೀಚೆಗೆ ಹೈಕೋರ್ಟ್ ಪುರಸ್ಕರಿಸಿತ್ತು. ಇದನ್ನು ಮರುಪರಿಶೀಲಿಸುವಂತೆ ಕೋರಿ ರಾಜ್ಯ ಸರಕಾರ ಅರ್ಜಿ ಸಲ್ಲಿಸಿತ್ತು. ಜೂನ್ 10ರವರೆಗೆ 3,243 ಮಂದಿ ಚುನಾವಣೋತ್ತರ ಹಿಂಸಾಚಾರದಿಂದ ಪರಿಣಾಮಕ್ಕೆ ಒಳಗಾಗಿದ್ದಾರೆ. ಹಲವು ಪ್ರಕರಣಗಳಲ್ಲಿ ಸಂತ್ರಸ್ತರು ಪೊಲೀಸ್ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ದೂರುಗಳಿವೆ ಎಂದು ಪ.ಬಂಗಾಳ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ, ಪ್ರಕರಣದ ಪರಿಶೀಲನೆಗೆ ಸಮಿತಿಯೊಂದನ್ನು ರಚಿಸುವಂತೆ ಹೈಕೋರ್ಟ್ ನ್ಯಾಯಪೀಠ ಎನ್‌ಎಚ್‌ಆರ್‌ಸಿಗೆ ಸೂಚಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News