ಜೂ. 23ರಿಂದ ಜುಲೈ 5ರವರೆಗೆ ದ.ಕ. ಜಿಲ್ಲೆಯಲ್ಲಿ ಎಲ್ಲಾ ಅಂಗಡಿಗಳು ಓಪನ್: ರಾಜ್ಯ ಸರಕಾರದ ಅಧಿಕೃತ ಆದೇಶ

Update: 2021-06-22 11:11 GMT

ಮಂಗಳೂರು, ಜೂ. 22: ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಇಂದು ಬೆಳಗ್ಗೆ ನಾಳೆಯಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ಕಲ್ಪಿಸಲಾಗಿವೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

ಈ ಆದೇಶದಂತೆ ಜೂ. 23ರಿಂದ ಜುಲೈ 5ರವರೆಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶವಿರುತ್ತದೆ. ಆದರೆ ಈ ಅವಧಿಯಲ್ಲಿ ಎಸಿ (ಏರ್ ಕಂಡಿಷನ್ಡ್) ಅಂಗಡಿಗಳು ಹಾಗೂ ಎಸಿ ಹೊಂದಿರುವ ಶಾಪ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು ಮತ್ತು ಮಾಲ್‌ಗಳಿಗೆ ಕಾರ್ಯಾಚರಣೆಗೆ ಅವಕಾಶವಿರುವುದಿಲ್ಲ.

ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 24ರಡಿ ಪ್ರವದತ್ತವಾಗಿರುವ ಅಧಿಕಾರದಂತೆ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರು, ದ.ಕ. ಜಿಲ್ಲೆಯ ಪ್ರಸಕ್ತ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News