ನಾಲ್ಕು ಜಿಲ್ಲೆಗಳಲ್ಲಿ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ

Update: 2021-06-22 13:15 GMT

ಬೆಂಗಳೂರು, ಜೂ.22: ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹವಾನಿಯಂತ್ರಿತ ಸೌಲಭ್ಯವುಳ್ಳ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‍ಗಳನ್ನು ಹೊರತುಪಡಿಸಿ ಎಲ್ಲ ಬಗೆಯ ಅಂಗಡಿಗಳನ್ನು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತೆರೆಯಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಜೂ.23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.

ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂರೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ‌.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News