ರಾಜ್ಯದಲ್ಲಿ ಈವರೆಗೆ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿಲ್ಲ: ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ

Update: 2021-06-22 16:25 GMT

ಬೆಂಗಳೂರು, ಜೂ.22: ರಾಜ್ಯದಲ್ಲಿ ಯಾವುದೇ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಈಗಾಗಲೇ ಮಾಹಿತಿ ಪಡೆಯಲಾಗಿದ್ದು, ಯಾವುದೇ ಪ್ರಕರಣ ರಾಜ್ಯದಲ್ಲಿ ಪತ್ತೆಯಾಗಿಲ್ಲ ಎಂದರು.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಬೆಂಗಳೂರಿನಲ್ಲಿ ಈವರೆಗೆ ಡೆಲ್ಟಾ ಅಥವಾ ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News