ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ

Update: 2021-06-22 17:30 GMT

ಉಡುಪಿ, ಜೂ.22: ಕೋವಿಡ್-19ರ ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು, ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಘೋಷಿಸಿದ್ದ 3,000 ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್‌ನ ನೆರಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ಸರಕಾರದ ಈ ನಿರ್ಧಾರದಿಂದಾಗಿ 22,000 ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದ್ದು, ಇದಕ್ಕಾಗಿ ಅಂದಾಜು 6.60 ಕೋಟಿ ರೂ. ಮೀಸಲಿರಿಸ ಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹಷರ್ ತಿಳಿಸಿದ್ದಾರೆ.

ಚಲನಚಿತ್ರ ರಂಗದವರು ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್‌ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆ ಗಳಿಗೆ ವರ್ಗಾಯಿಸಲು ಅನುಕೂಲವಾಗುವಂತೆ ಸೇವಾಸಿಂಧು ವೆಬ್ ಪೋರ್ಟಲ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿದೆ.ಅರ್ಜಿ ನಮೂನೆ,ಇತರ ವಿವರಗಳಿಗೆ -www.sevasindhu.karnataka.gov.in- ಭೇಟಿ ನೀಡಿ ಪಡೆದುಕೊಳ್ಳಬಹುದು.

ಒಬ್ಬರಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು ಮತ್ತು ಅಲ್ಲಿಂದ ಕಡ್ಡಾಯವಾಗಿ ಶಿಫಾರಸ್ಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಬೇಕು. ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯನಿಧಿ (ಪ್ರಾಡೆಂಟ್ ಫಂಡ್) ಸಂಖ್ಯೆಯೊಂದಿಗೆ ಚಲನಚಿತ್ರ ಮಂದಿರದ ಮಾಲಕರ ಪತ್ರ ಸಹಿತ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ಜುಲೈ 9ರವರೆಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ.

ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ:8904645529ನ್ನು ಸಂಪರ್ಕಿಸಬಹುದು ಇಲ್ಲವೆ ಈಮೇಲ್ -dpmfilm1@gmail.com- ಮೂಲಕ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News