ದೇವದಾಸಿ ಮಕ್ಕಳ ವಿವಾಹಕ್ಕೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Update: 2021-06-22 17:32 GMT

ಉಡುಪಿ, ಜೂ.22: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗುರುತಿಸಲ್ಪಟ್ಟ ಪರಿಶಿಷ್ಟ ಜಾತಿಯ ದೇವದಾಸಿಯರ ಗಂಡು ಮಕ್ಕಳು ಸ್ವ-ಜಾತಿ ಅಥವಾ ಇತರೆ ಜಾತಿಯ ಹುಡುಗಿಯನ್ನು ವಿವಾಹವಾದಲ್ಲಿ 3 ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿಯ ದೇವದಾಸಿಯರ ಹೆಣ್ಣು ಮಕ್ಕಳು ಸ್ವ-ಜಾತಿ ಅಥವಾ ಇತರೆ ಜಾತಿಯ ಹುಡುಗನನ್ನು ವಿವಾಹವಾದಲ್ಲಿ 5 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ - www.sw.kar.nic.in - ಅಥವಾ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News