ವಿಚಾರಣೆಗೆ ಬಾಕಿಯಿರುವ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಕೇಳಿದ ಹೈಕೋರ್ಟ್

Update: 2021-06-22 18:05 GMT

ಬೆಂಗಳೂರು, ಜೂ.22: ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳಲ್ಲಿ ಎಷ್ಟು ಕೇಸುಗಳು ಜೆಎಂಎಫ್‍ಸಿ ಕೋರ್ಟ್ ಗಳಲ್ಲಿ ಬಾಕಿ ಇವೆ ಎಂಬ ಕುರಿತಂತೆ ಅಂಕಿ ಅಂಶಗಳುಳ್ಳ ಮಾಹಿತಿ ಸಲ್ಲಿಸಲು ಹೈಕೋರ್ಟ್ ತನ್ನ ರಿಜಿಸ್ಚ್ರಾರ್ ಜನರಲ್‍ಗೆ ನಿರ್ದೇಶಿಸಿದೆ.

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸುವ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ಪ್ರಕರಣದಲ್ಲಿ ಅಮೈಕಸ್ ಕ್ಯೂರಿ ಆಗಿರುವ ಹಿರಿಯ ವಕೀಲರಾದ ಆದಿತ್ಯ ಸೋಂಧಿ ಜನಪ್ರತಿನಿಧಿಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಎದುರಾಗಿರುವ ತಾಂತ್ರಿಕ ಸಮಸ್ಯೆಯನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಮತ್ತೊಂದು ವಿಶೇಷ ನ್ಯಾಯಾಲಯ ಸ್ಥಾಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ, ಜೆಎಂಎಫ್‍ಸಿ ಕೋರ್ಟ್‍ಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಅಂಕಿ ಅಂಶಗಳನ್ನು ಸಲ್ಲಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜು.8ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News