ಕಲಬುರಗಿ: ಆಟೋ ರಿಕ್ಷಾ ಚಾಲಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ

Update: 2021-06-23 09:00 GMT

ಕಲಬುರಗಿ, ಜೂ.23: ಆಟೋ ರಿಕ್ಷಾ ಚಾಲಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಡಬರಾಬಾದ್ ನಲ್ಲಿ ಮಂಗಳವಾರ ತಡರಾತ್ರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.

ಸಂತೋಷ ಗುತ್ತೇದಾರ ಕೊಲೆಯಾದ ವ್ಯಕ್ತಿ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News