ಬೈಂದೂರು ತಾಲೂಕಿನಲ್ಲಿ ಮನೆಗಳಿಗೆ ಹಾನಿ
Update: 2021-06-23 19:01 IST
ಉಡುಪಿ, ಜೂ. 23: ನಿನ್ನೆ ಬೀಸಿದ ಗಾಳಿ-ಮಳೆಗೆ ಬೈಂದೂರು ತಾಲೂಕಿನಲ್ಲಿ ಮೂರು ಮನೆ ಹಾಗೂ ಜಾನುವಾರು ಕೊಟ್ಟಿಗೆಗಳಿಗೆ ಅಪಾರ ಹಾನಿಯಾಗಿದ್ದು ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ.
ಕಂಬದಕೋಣೆ ಗ್ರಾಮದ ಗಣಪಯ್ಯ ಕಾರಂತ ಎಂಬವರ ವಾಸದ ಪಕ್ಕಾ ಮನೆ ಗಾಳಿ-ಮಳೆಯಿಂದ ಭಾಗಶ: ಹಾನಿಯಾಗಿದ್ದು ಸುಮಾರು 50 ಸಾವಿರ ರೂ.ನಷ್ಟದ ಅಂದಾಜು ಮಾಡಲಾಗಿದೆ. ಅದೇ ರೀತಿ ಕಂಬದಕೋಣೆಯ ಚೆಣ್ಣಮ್ಮ ಹಾಗೂ ನಾವುಂದ ಗ್ರಾಮದ ಸುಬ್ಬಣ್ಣ ಶೆಟ್ಟಿ ಎಂಬವರ ಜಾನುವಾರು ಕೊಟ್ಟಿಗೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, ಕ್ರಮವಾಗಿ 50 ಸಾವಿರ ರೂ. ಹಾಗೂ 25,000ರೂ. ನಷ್ಟದ ಅಂದಾಜು ಮಾಡಲಾಗಿದೆ.