ಮಣಿಪಾಲ, ಉಡುಪಿ, ಕಾರ್ಕಳದ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಲಭ್ಯ
ಮಣಿಪಾಲ, ಜೂ. 23: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆ ಹಾಗೂ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಗಳು ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿರು ತ್ತದೆ ಎಂದು ಆಯಾ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿ ಮೊದಲ ಡೋಸ್ ಹಾಗೂ ಮೊದಲ ಡೋಸ್ ಪಡೆದು 84 ದಿನಗಳ ಬಳಿಕ ಎರಡನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿರುತ್ತದೆ. ಸರಕಾರ ನಿಗದಿ ಪಡಿಸಿದ ದರದಲ್ಲಿ ಲಸಿಕೆಯನ್ನು ನೀಡುತ್ತಿದ್ದು ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಆಸ್ಪತ್ರೆಗಳ ಪ್ರಕಟಣೆ ತಿಳಿಸಿವೆ.
ಲಸಿಕೆಯ ಅಗತ್ಯವಿದ್ದವರು ಕೋವಿನ್ ಆ್ಯಪ್‌ನಲ್ಲಿ ನೋಂದಣಿ ಮಾಡಿ ಅಥವಾ ನೇರವಾಗಿ ಆಧಾರ್ ಕಾರ್ಡ್‌ನೊಂದಿಗೆ ಮರೇನಾ ಸ್ಪೋಟ್ಸರ್ ಕಾಂಪ್ಲೆಕ್ಸ್‌ಗೆ ಬರುವಂತೆ ಕೋರಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಕೌಂಟರ್‌ನ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಳಿಗೆ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡ ಬಹುದು. ಮಣಿಪಾಲ ಕಸ್ತೂರ್ಬಾ ಆಸ್ಪತೆ:0820-2922761, ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆ:0820-2942126, ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತೆ: 08258-230583.
ನಾವು ನೀವಿರುವ ಸ್ಥಳಕ್ಕೆ ಬಂದು ವ್ಯಾಕ್ಸಿನೇಷನ್ ನೀಡುವ ಲಸಿಕಾ ಕಾರ್ಯಕ್ರಮವನ್ನು ಕೂಡ ಆಯೋಜಿಸುತ್ತೇವೆ. ಈ ಕುರಿತು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:7338625909ಕ್ಕೆ ಕರೆ ಮಾಡುವಂತೆ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.