×
Ad

ಉಡುಪಿ: ಸ್ಮಾರ್ಟ್‌ಕ್ಲಾಸ್ ರೂಮ್ ಉದ್ಘಾಟನೆ, ಟ್ಯಾಬ್ಲೆಟ್ ಪಿಸಿ ವಿತರಣೆ

Update: 2021-06-23 19:39 IST

ಉಡುಪಿ, ಜೂ.23: ಕರ್ನಾಟಕ ಸರಕಾರದ ಕಾಲೇಜು ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳಲ್ಲಿ ನೂತನವಾಗಿ ನಿರ್ಮಿಸಿರುವ ಸ್ಮಾರ್ಟ್ ಕ್ಲಾಸ್ ರೂಮ್‌ಗಳನ್ನು ಶಾಸಕ ಕೆ.ರಘುಪತಿ ಭಟ್ ಬುಧವಾರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಅವರು ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ.ಸಿ.ಗಳನ್ನು ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋವಿಡ್ ಸಂಕಷ್ಟದ ಹಿನ್ನೆಲೆ ಯಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಉದ್ದೇಶದಿಂದ, ಸರಕಾರ ರಾಜ್ಯದ ಎಲ್ಲಾ ಸರಕಾರಿ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಕೂಲವಾಗಲಿದೆ ಎಂದರು.

ಕೊರೋನದ ಕಾರಣದಿಂದ ಎಲ್ಲಾ ಶಾಲಾ-ಕಾಲೇಜುಗಳು ಮುಚ್ಚಿರುವುದ ರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿ ದ್ದಾರೆ. ಇದನ್ನು ತಡೆಯಲು ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅನುಕೂಲವಾಗುವಂತೆ ಕೋವಿಡ್ ಲಸಿಕಾ ಅಭಿಯಾನವನ್ನು ಆರಂಭಿಸಿ, ಪ್ರತಿಯೊಬ್ಬ ವಿದ್ಯಾರ್ಥಿ ಲಸಿಕೆ ಪಡೆದು ಶಾಲಾ- ಕಾಲೇಜು ಗಳನ್ನು ಪುನರಾರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದರು.

ಉಡುಪಿ ರೋಟರಿ ಕ್ಲಬ್ ಹಾಗೂ ಕಾಗ್ನಿಜೆಂಟ್ ಕಂಪೆನಿಗಳು ನೀಡಿರುವ 50 ಕಂಪ್ಯೂಟರ್‌ಗಳನ್ನು ಇದೇ ವೇಳೆ ಕಾಲೇಜಿಗೆ ಹಸ್ತಾಂತರಿಸಲಾಯಿತು.

ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಹೆಗ್ಡೆ ಅತಿಥಿ ಗಳನ್ನು ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣ ಸೌಲಭ್ಯಗಳು ದೊರಕುವಂತೆ ಮಾಡುವುದು ಸರಕಾರದ ಉದ್ದೇಶವಾಗಿದ್ದು, ಈ ಟ್ಯಾಬ್ಲೆಟ್‌ಗಳಿಗೆ ಸಿಮ್ ಅಳವಡಿಸುವ ಮೂಲಕ ಇಂಟರ್‌ನೆಟ್ ಸಂಪರ್ಕ ಕಲ್ಪಿಸಿ, ಆನ್‌ಲೈನ್ ತರಗತಿಯಲ್ಲಿ ಪಾಲ್ಗೊಳ್ಳಬಹುದು ಎಂದರು.

ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ವಂದಿಸಿದರೆ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರೋಶನ್‌ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಉಡುಪಿ ರೋಟರಿ ಕ್ಲಬ್‌ನ ಡಾ.ರಾಜಾರಾಮ್ ಭಟ್, ಡಾ. ಗಣೇಶ್ ಮಣಿಪಾಲ್, ಜಿಪಂನ ಮಾಜಿ ಉಪಾಧ್ಯಕ್ಷೆ ಮಮತಾ ಮತ್ತು ಕಾಲೇಜಿನ ಉಪನ್ಯಾಸಕರು ಉಪಸ್ಥಿತ ರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News