×
Ad

ಬಾಲಹಿತೈಷಿ ಮಾರ್ಗದರ್ಶಕ ಹುದ್ದೆಗೆ ಅರ್ಜಿ ಆಹ್ವಾನ

Update: 2021-06-23 19:45 IST

ಉಡುಪಿ, ಜೂ.23: ಕೋವಿಡ್-19 ಸೋಂಕಿನಿಂದ ಪೋಷಕರನ್ನು ಕಳೆದು ಕೊಂಡು ಆಘಾತಕ್ಕೆ ಒಳಗಾಗಿರುವ 18 ವರ್ಷದೊಳಗಿನ ಮಕ್ಕಳಿಗೆ ನೈತಿಕ, ಭಾವನಾತ್ಮಕ ಮತ್ತು ಸಾಮಾಜಿಕ ನೆರವನ್ನು ಒದಗಿಸಿ ಅವರನ್ನು ಮಾನಸಿಕ ಆಘಾತದಿಂದ ಹೊರತರಲು ಹಾಗೂ ಮಗುವಿನ ಧೀರ್ಘಕಾಲಿಕ ಸಕಾರಾತ್ಮಕ ಬೆಳವಣಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಬಾಲಹಿತೈಷಿ ಕಾರ್ಯಕ್ರಮದಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ - -ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574964ನ್ನು ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News