ಮೋಟಾರು ವಾಹನ ತೆರಿಗೆ ಶೇ.50ರಷ್ಟು ವಿನಾಯಿತಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ

Update: 2021-06-23 14:46 GMT

ಬೆಂಗಳೂರು, ಜೂ.23: ಕೋವಿಡ್-19ರ 2ನೇ ಅಲೆಯ ಹಿನ್ನೆಲೆಯಲ್ಲಿ, ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ 2021ರ ಜೂನ್ ತಿಂಗಳಿಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇ.50ರಷ್ಟಕ್ಕೆ ವಿನಾಯಿತಿ ನೀಡಿ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News