×
Ad

ದ.ಕ. ಜಿಲ್ಲೆ: ಕೋವಿಡ್‌ಗೆ 13 ಬಲಿ; 538 ಮಂದಿಗೆ ಕೊರೋನ ಪಾಸಿಟಿವ್

Update: 2021-06-23 20:32 IST

ಮಂಗಳೂರು, ಜೂ. 23: ದ.ಕ. ಜಿಲ್ಲೆಯಲ್ಲಿ ಬುಧವಾರ ಮತ್ತೆ 13 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,093ಕ್ಕೇರಿದೆ. ಅಲ್ಲದೆ ಬುಧವಾರ ಜಿಲ್ಲೆಯಲ್ಲಿ 538 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.7ಕ್ಕೇರಿದೆ. ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 90,161ಕ್ಕೇರಿದೆ.

ಬುಧವಾರ 535 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 82,258ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 6,810 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 9,86,407 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 8,89,516 ಮಂದಿಯ ವರದಿ ನೆಗೆಟಿವ್ ಬಂದಿದೆ.

ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 73,626 ಮಂದಿಯಿಂದ 89,47,617 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News