ಡೆಲ್ಟಾ ಪ್ಲೆಸ್ ಸೋಂಕು ಎದುರಿಸಲು ಸರಕಾರದ ಸಿದ್ಧತೆ: ಗೃಹ ಸಚಿವ ಬೊಮ್ಮಾಯಿ

Update: 2021-06-23 17:43 GMT

ಹಾವೇರಿ, ಜೂ. 23: ಕೋವಿಡ್ `ಡೆಲ್ಟಾ ಪ್ಲಸ್' ವೈರಸ್ ಎದುರಿಸಲು ರಾಜ್ಯ ಸರಕಾರ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಈ ವೈರಸ್ ಮೊದಲು ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕಾಣಿಸಿಕೊಂಡಿದೆ. ದೇಶದಲ್ಲಿ ಈ ಸೋಂಕು 35 ರಿಂದ 50 ಜನರಲ್ಲಿ ಕಾಣಿಸಿಕೊಂಡಿದೆ ಎಂದು ಗೊತ್ತಾಗಿದೆ ಎಂದು ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾತನಾಡಿದ ಅವರು, `ಈ ವೈರಸ್ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಇದಲ್ಲದೆ ಇದಕ್ಕೆ ಲಸಿಕೆ ಪರಿಣಾಮ ಬೀರುತ್ತಾ ಇಲ್ಲವೋ ಎಂಬುದನ್ನ ಪರೀಕ್ಷೆ ನಡೆಸಲಾಗುತ್ತದೆ. ಒಟ್ಟಾರೆಯಾಗಿ ಡೆಲ್ಟಾ ಪ್ಲಸ್ ಎದುರಿಸಲು ಸರಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಆದುದರಿಂದ ಜನರು ಯಾವುದೇ ಸಂದರ್ಭದಲ್ಲಿಯೂ ಆತಂಕಪಡುವ ಅಗತ್ಯವಿಲ್ಲ ಎಂದರು.

ಆಯುಷ್ ವೈದ್ಯರನ್ನು ಕೋವಿಡ್ ಮೂರನೆ ಅಲೆ ಎದುರಿಸಲು ಸೇವೆಗೆ ಬಳಸಿಕೊಳ್ಳುವ ಸಂಬಂಧ ಆರೋಗ್ಯ ಸಚಿವ ಡಾ.ಸುಧಾಕರ್ ಅವರೊಂದಿಗೆ ಮಾತನಾಡಿದ್ದೇನೆ. ಕೋವಿಡ್ ಮೊದಲನೆ ಅಲೆ ಮತ್ತು 2ನೆ ಅಲೆಯಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. ಎಂಬಿಬಿಎಸ್ ವೈದ್ಯರಿಲ್ಲ ಕಡೆಗಳಲ್ಲಿ ಆಯುಷ್ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಸಂಕಷ್ಟದ ಸಂದರ್ಭದಲ್ಲಿ ವೈದ್ಯರ ಅಗತ್ಯವಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News