ರೈತರಿಗೆ ಮತ್ತೊಂದು ಅವಕಾಶ ನೀಡಲು ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿಗೆ ಚಿಂತನೆ: ಸಚಿವ ಆರ್.ಅಶೋಕ್

Update: 2021-06-23 18:03 GMT

ಬೆಂಗಳೂರು, ಜೂ. 23: `ಕರ್ನಾಟಕ ಸರಕಾರವು ರಾಜ್ಯದಲ್ಲಿನ ರೈತರಿಗೆ ನೆರವಾಗುವ ನಿಟ್ಟಿನಲ್ಲಿ 'ಇನಾಂ' ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ರಾಜ್ಯದಲ್ಲಿ 70 ಸಾವಿರ ಎಕರೆಗಿಂತ ಹೆಚ್ಚಿನ ಭೂಮಿ ಇನಾಂ ಕಾಯ್ದೆಯ ವ್ಯಾಪ್ತಿಯಲ್ಲಿದೆ. ರಾಜ ಮಹಾರಾಜರು, ಬ್ರಿಟಿಷರ ಕಾಲದಲ್ಲಿ 500, 1 ಸಾವಿರ ಎಕರೆ ಇನಾಂ ಜಮೀನುಗಳನ್ನ ನೀಡಲಾಗಿತ್ತು. ರೈತರು ಅಲ್ಲಿ ಉಳುಮೆ ಮಾಡಿಕೊಂಡಿದ್ದರು. ಇನಾಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ರೈತರಿಗೆ ಪಹಣಿ ಕೊಡುವ ಕೆಲಸ ಆಗುತ್ತಿತ್ತು.

ಇನಾಂ ಕಾಯ್ದೆ ರದ್ದಾದಾಗ ತಿಳಿವಳಿಕೆಯ ಕೊರತೆಯಿಂದ ಲಕ್ಷಾಂತರು ರೈತರು ಅರ್ಜಿಯನ್ನೇ ಸಲ್ಲಿಸಿರಲಿಲ್ಲ. ಈ ನಿಟ್ಟಿನಲ್ಲಿ ಅವರಿಗೊಂದು ಅವಕಾಶ ನೀಡುವ ನಿಟ್ಟಿನಲ್ಲಿ ಇನಾಮ್ತಿ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿದ್ದ 70 ಸಾವಿರ ಎಕರೆ ಇನಾಮ್ತಿ ಜಮೀನು ಕುರಿತು ಪರಿಶೀಲನೆ ನಡೆಸಲು ನಿವೃತ್ತ ಅಧಿಕಾರಿ ಪಿಎಸ್ ವಸ್ತ್ರದ್ ನೇತೃತ್ವದಲ್ಲಿ ಸಮಿತಿ ರಚಿಲಾಗಿತ್ತು. ಆ ಸಮಿತಿಯು ರೈತರಿಗೆ ಅರ್ಜಿ ಸಲ್ಲಿಸಲು ಒಂದಿಷ್ಟು ಕಾಲಾವಕಾಶ ನೀಡಬೇಕು ಎಂದು ವರದಿ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ' ಎಂದು ಅವರು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News