×
Ad

ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮ ನಡೆಸಿದರೆ ಕ್ರಮ: ಉಡುಪಿ ಜಿಲ್ಲಾಧಿಕಾರಿ

Update: 2021-06-24 12:42 IST

ಉಡುಪಿ, ಜೂ. 24: ಜಿಲ್ಲೆಯ ಪಾಸಿಟಿವಿಟಿ  ಪ್ರಮಾಣ  ಕಡಿಮೆಯಾದ ಹಿನ್ನೆಲೆಯಲ್ಲಿ ಸರಕಾರ ಲಾಕ್‌ಡೌನ್  ಸಡಿಲಿಕೆ ಮಾಡಿರುವು ದರ ದುರುಪಯೋಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

ಜಿಲ್ಲೆಯ ಅಲ್ಲಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟವರಾರು ? ಹೋಟೆಲುಗಳಲ್ಲಿ 6 ಗಂಟೆ ತನಕ ಜನರು ಸೇರುತ್ತಾರೆ. ಬಸ್ ಗಳಲ್ಲಿ 50ಕ್ಕಿಂತ ಹೆಚ್ಚು ಪ್ರಯಾಣಿಕರು ಕಂಡು ಬರುತ್ತಿದ್ದಾರೆ. ರಾಜಕೀಯ ಪಕ್ಷಗಳಿಗೆ ಕಾರ್ಯಕ್ರಮ ನಡೆಸಲು ಅನುಮತಿ ಕೊಟ್ಟವರು ಯಾರು ? ಎಂದವರು ವೀಡಿಯೊ ಹೇಳಿಕೆಯೊಂದರಲ್ಲಿ ಪ್ರಶ್ನಿಸಿದ್ದಾರೆ.

ಲಾಕ್‌ಡೌನ್ ಸಡಿಲಿಕೆಯನ್ನು ಯಾರೂ ದುರುಪಯೋಗ ಮಾಡಬಾರದು. ಒಂದು ವೇಳೆ ದುರುಪಯೋಗ ಮಾಡಿದರೆ ಅಂಥವರ ವಿರುದ್ಧ ಎಪಿಡೆಮಿಕ್ ಆಕ್ಟ್ ನಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್
ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News