×
Ad

ಕೋವಿಡ್ ಕರ್ತವ್ಯದಿಂದ ಶಿಕ್ಷಕರ ಬಿಡುಗಡೆಗೆ ಸಚಿವ ಸುರೇಶ್ ಕುಮಾರ್ ಸೂಚನೆ

Update: 2021-06-24 18:14 IST

ಬೆಂಗಳೂರು, ಜೂ.24: ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸೆಸೆಲ್ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಾದ ಶಿಕ್ಷಕರು ಕೋವಿಡ್ ಲಸಿಕೆ ಪಡೆಯುವುದು ಮತ್ತು ಪರೀಕ್ಷಾ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಶೈಕ್ಷಣಿಕ ಚುಟುವಟಿಕೆಗಳು ಪ್ರಾರಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಹ ನಡೆಯುತ್ತಿರುವುದರಿಂದ ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಿರಬೇಕಿದೆ. ಆದುದರಿಂದ, ತಕ್ಷಣವೇ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News