×
Ad

ರಾಷ್ಟ್ರೀಯ ಮಟ್ಟದ ಕಿರುಚಿತ್ರ ಸ್ಪರ್ಧೆ

Update: 2021-06-24 20:14 IST

ಉಡುಪಿ, ಜೂ. 24: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲಶಕ್ತಿ ಮಂತ್ರಾಲಯವು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆಗಸ್ಟ್ 15ರವರೆಗೆ ರಾಷ್ಟ್ರೀಯ ಸ್ವಚ್ಛತಾ ಫಿಲ್ಮೋಂ ಕಾ ಅಮೃತ್ ಮಹೋತ್ಸವ (ಅಜಾದ್ ಕಾ ಅಮೃತ್ ಮಹೋತ್ಸವ) ಎಂಬ ಹೆಸರಿನಡಿ ರಾಷ್ಟ್ರ ಮಟ್ಟದ ಕಿರುಚಿತ್ರ ಸ್ಪರ್ಧೆಯನ್ನು ಆಯೋಜಿಸಿದೆ.

ಕಿರುಚಿತ್ರ ಸ್ಪರ್ಧೆಯು ಎರಡು ವಿಭಾಗಗಳಲ್ಲಿ ನಡೆಯಲಿದ್ದು, 10 ವರ್ಷ ಮೇಲ್ಪಟ್ಟ ನಾಗರಿಕರು ಹಾಗೂ ಸಾಂಸ್ಥಿಕ ವಿಭಾಗದಲ್ಲಿ ಗ್ರಾಮ ಪಂಚಾಯತ್ ಗಳು, ಸಮುದಾಯ ಆಧಾರಿತ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸ್ವ-ಸಹಾಯ ಸಂಘ ಸಂಸ್ಥೆಗಳು ಈ ಸ್ಫರ್ಧೆಯಲ್ಲಿ ಭಾಗವಹಿಸಬಹುದು.

ವರ್ಷದ ಕೊನೆಯಲ್ಲಿ ನವದೆಹಲಿಯಲ್ಲಿ ನಡೆಯುವ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಸಮಾರಂಭದಲ್ಲಿ ಎರಡು ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಯನ್ನು ಸಂಪಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News