ದ.ಕ. ಜಿಲ್ಲೆ : ಕೋವಿಡ್‌ಗೆ 15 ಬಲಿ; 498 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಜೂ. 24: ದ.ಕ.ಜಿಲ್ಲೆಯಲ್ಲಿ ಗುರುವಾರ ಮತ್ತೆ 15 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,108ಕ್ಕೇರಿದೆ.
ಗುರುವಾರ ಮೃತಪಟ್ಟವರಲ್ಲಿ ಮಂಗಳೂರು 7, ಪುತ್ತೂರು, ಬಂಟ್ವಾಳ, ಸುಳ್ಯ ತಲಾ 1, ಬೆಳ್ತಂಗಡಿ 2, ಚಿಕ್ಕಮಗಳೂರು 2 ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಬ್ಬರು ಸೇರಿದ್ದಾರೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುರುವಾರ ಜಿಲ್ಲೆಯಲ್ಲಿ 498 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.5.59ಕ್ಕಿಳಿದಿದೆ. ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 90,659ಕ್ಕೇರಿದೆ.
ಗುರುವಾರ 702 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 82,960ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 6,591 ಸಕ್ರಿಯ ಪ್ರಕರಣವಿದೆ. ಜಿಲ್ಲೆಯ ಸುಳ್ಯದಲ್ಲಿ 2 ಮತ್ತು ಮಂಗಳೂರಿನಲ್ಲಿ 1 ಸಹಿತ ಮೂರು ಕಡೆಯಲ್ಲಿ ಕಂಟೈನ್ಮೆಂಟ್ ವಲಯ ಘೋಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.