×
Ad

ಕಾಪು: ಕೇಂದ್ರ, ರಾಜ್ಯ ಸರ್ಕಾರ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

Update: 2021-06-24 22:38 IST

ಕಾಪು : ಕೋವಿಡ್- 19 ಎರಡನೇ ಅಲೆ ನಿಯಂತ್ರಿಸುವಲ್ಲಿ ವಿಫಲವಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಸಂಕಷ್ಟದ ಸಂದರ್ಭದಲ್ಲೂ ತೈಲೋತ್ಪನ್ನ ಸಹಿತವಾಗಿ, ವಿದ್ಯುತ್, ರಸಗೊಬ್ಬರಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಜಾತ್ಯಾತೀತ ಜನತಾದಳದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಪುವಿನಲ್ಲಿ ಜೆಡಿಎಸ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯತೆಯನ್ನು ಖಂಡಿಸಿ ಕಾಪುವಿನಲ್ಲಿ ಜೆಡಿಎಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕೊರೋನ ಸೋಂಕಿನಿಂದಾಗಿ ಸಾವಿರಾರು ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ವರೆಗೆ ಪರಿಹಾರ ಧನ ವಿತರಣೆ, ಕೊರೊನಾ ಸಂಕಷ್ಟದಿಂದಾಗಿ ಆರ್ಥಿಕ ಸಮಸ್ಯೆಗೆ ಸಿಲುಕಿರುವ ಕುಟುಂಬಗಳಿಗೆ ಜೀವನ ಪುನರ್ ರೂಪಿಸಿಕೊಳ್ಳಲು ಆರ್ಥಿಕ ಧನ ಸಹಾಯ ನೀಡಿಕೆ ಸಹಿತವಾಗಿ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ತುರ್ತು ಪರಿಹಾರ ಕ್ರಮಗಳನ್ನು ತೆಗೆದು ಕೊಳ್ಳುವಂತೆ ಸರಕಾರವನ್ನು ಒತ್ತಾಯಿಸಿ ತಹಶೀಲ್ದಾರ್ ಪ್ರತಿಭಾ ಅವರ ಮೂಲಕವಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಜೆಡಿಎಸ್ ಪಕ್ಷದ ಮುಖಂಡರಾದ ವಾಸುದೇವ ರಾವ್, ಜಯರಾಮ ಆಚಾರ್ಯ, ಜಯ ಕುಮಾರ್ ಪರ್ಕಳ, ಮಹಮ್ಮದ್ ಯೂಸುಪ್, ಇಕ್ಬಾಲ್ ಆತ್ರಾಡಿ, ಇಬ್ರಾಹಿಮ್ ತವಕ್ಕಲ್, ಪ್ರಕಾಶ್ ಶೆಟ್ಟಿ, ವಿನ್ಸೆಂಟ್ ಅಲ್ಮೇಡಾ, ರಮೇಶ್, ಸನಾವತ್, ಯು. ಎ. ರಶೀದ್, ಹುಸೇನ ಹೈಕಾಡಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News