ಹಜ್ ಸಮಿತಿ ನೂತನ ಅಧ್ಯಕ್ಷರಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಗೆ ಸನ್ಮಾನ
Update: 2021-06-24 23:02 IST
ಬೆಂಗಳೂರು: ರಾಜ್ಯ ಹಜ್ ಸಮಿತಿಯ ನೂತನ ಅಧ್ಯಕ್ಷರಾಗಿ ರವೂಫುದ್ದೀನ್ ಕಚೇರಿವಾಲೆ ಗುರುವಾರ ಆಯ್ಕೆಯಾಗಿದ್ದಾರೆ. ಜೆಡಿಎಸ್ ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್ ವಿರುದ್ಧ ಎರಡು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ರವೂಫುದ್ದೀನ್ ಕಚೇರಿವಾಲೆ ಅವರು ತಮ್ಮ ಆಯ್ಕೆಯ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಉಪಸ್ಥಿತರಿದ್ದರು.