ಆರೋಪಿಗಳ ಶೀಘ್ರ ಬಂಧನ: ಗೃಹ ಸಚಿವ ಬಸವರಾಜ ಬೊಮ್ಮಾಯಿ

Update: 2021-06-24 18:39 GMT

ಹಾವೇರಿ, ಜೂ. 24: `ಬೆಂಗಳೂರಿನ ಮಾಜಿ ಕಾರ್ಫೋರೆಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು' ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ. 

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರೇಖಾ ಅವರ ಕೊಲೆ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಅವರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅತಿ ಶೀಘ್ರದಲ್ಲಿ ಕೊಲೆ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಇದೇ ವೇಳೆ ಹೇಳಿದರು.

`ಕೊಲೆ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಮತ್ತು ಯಾವ ಕಾರಣಕ್ಕಾಗಿ ಈ ಹತ್ಯೆ ನಡೆದಿದೆ. ಆರೋಪಿಗಳ ಹಿನ್ನಲೆ ಸೇರಿದಂತೆ ವಿವಿಧ ದೃಷ್ಟಿಕೋನದಿಂದ ಪೊಲೀಸರು ತನಿಖೆ ನಡೆಸಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News