ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ನಿವಾಸದಲ್ಲಿ ಈಡಿ ಶೋಧ

Update: 2021-06-25 05:04 GMT
photo: ANI

ಹೊಸದಿಲ್ಲಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ(ಈಡಿ) ಶುಕ್ರವಾರ ಶೋಧ ಕಾರ್ಯಾಚರಣೆ ನಡೆಸಿದೆ.

ನಾಗ್ಪುರದ ದೇಶ್ ಮುಖ್ ಅವರ ಮನೆಯಲ್ಲಿ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರವೊಂದರಲ್ಲಿ ದೇಶ್ ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ್ದರು. ಆ ನಂತರ ಹಿರಿಯ ಎನ್‌ಸಿಪಿ ನಾಯಕ ದೇಶ್ ಮುಖ್ ಮಂತ್ರಿ ಸ್ಥಾನವನ್ನು ತ್ಯಜಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News