ಉಡುಪಿ ಜಿಲ್ಲೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಭೇಟಿ
Update: 2021-06-25 18:47 IST
ಉಡುಪಿ, ಜೂ.25: ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಮಂಗಳೂರಿನಿಂದ ಇಂದು ಸಂಜೆ ಆಗಮಿಸಿದ್ದು, ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ನಾಳೆ ಅವರು ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಶನಿವಾರ ಬೆಳಗ್ಗೆ 9:00ಕ್ಕೆ ಕಡೆಕಾರು ಗ್ರಾಪಂ ವತಿಯಿಂದ ಆಯೋಜಿಸುವ ಕೃಷಿ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಳಿಕ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ನಡೆದಿರುವ 1500 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ವೀಕ್ಷಿಸುವರು.
ಅಪರಾಹ್ನ 12 ಗಂಟೆಗೆ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣ ದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ, ಮುಂಗಾರು ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಪೂರ್ವಸಿದ್ಧತೆಗಳ ಸಮೀಕ್ಷೆ ನಡೆಸುವರು. ಸಂಜೆ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವರು.