×
Ad

ಲಾಕ್‍ಡೌನ್‍ನಿಂದ ಕೆಲಸವಿಲ್ಲದೆ ಬೇಸತ್ತ ಯುವಕ ಆತ್ಮಹತ್ಯೆ

Update: 2021-06-25 20:53 IST

ಮೈಸೂರು,ಜೂ.25: ಲಾಕ್‍ಡೌನ್‍ನಿಂದ ಕೆಲಸವಿಲ್ಲದೇ ಮನೆಯಲ್ಲೇ ಇರುತ್ತಿದ್ದ ಯುವಕ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಟಿ.ಕೆ.ಬಡಾವಣೆ ನಿವಾಸಿ ಭಾರ್ಗವ್ (24) ನೇಣಿಗೆ ಶರಣಾದ ಯುವಕ.

ತಂದೆ ಮತ್ತು ತಾಯಿ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪುತ್ರ ಭಾರ್ಗವ್ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಲಾಕ್‍ಡೌನ್ ನಂತರ ಅಂಗಡಿ ಬಂದ್ ಆಗಿತ್ತು. ಕೆಲಸವಿಲ್ಲದೆ ಮನೆಯಲ್ಲೇ ಇರುತ್ತಿದ್ದ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News