ಚಾಮರಾಜನಗರ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಾಕ್‍ಡೌನ್ ಸಡಿಲಿಕೆ

Update: 2021-06-25 15:49 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ. 25: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗುತ್ತಿದೆ. ಆ ಹಿನ್ನೆಲೆಯಲ್ಲಿ ಚಾಮರಾಜನಗರ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದೆ.

ಕೋವಿಡ್ ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆ ಇರುವ ಹಿನ್ನೆಲೆಯಲ್ಲಿ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ಲಾಕ್‍ಡೌನ್ ನಿರ್ಬಂಧ ಸಡಿಲಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಇರುವಂತೆ ಬೆಳಗ್ಗೆ 6ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಜೊತೆಗೆ ಕೆಎಸ್ಸಾರ್ಟಿಸಿ, ಆಟೋರಿಕ್ಷಾ, ಟ್ಯಾಕ್ಸಿ ಸೇರಿದಂತೆ ಸಾರಿಗೆ ಸಂಚಾರ ಆರಂಭಿಸಿದ್ದು, ಶೇ.50ರಷ್ಟು ಆಸನದ ನಿರ್ಬಂಧ ವಿಧಿಸಲಾಗಿದೆ.

ಉಳಿದಂತೆ ಮೈಸೂರು ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.10ಕ್ಕಿಂತ ಕಡಿಮೆಯಾಗಿದೆ. ಆ ಹಿನ್ನೆಲೆಯಲ್ಲಿ ಅನ್‍ಲಾಕ್-1 ಮಾರ್ಗಸೂಚಿ ಅನ್ವಯವಾಗಲಿದ್ದು, ಬೆಳಗ್ಗೆ 6ಗಂಟೆಯಿಂದ ಮಧ್ಯಾಹ್ನ 1ಗಂಟೆಯ ವರೆಗೆ ಅಂಗಡಿ-ಮುಂಗಟ್ಟುಗಳ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಮಾರ್ಗಸೂಚಿ ಹೊಡಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News