ಡೆಲ್ಟಾ ವೈರಸ್: ಮಹಾರಾಷ್ಟ್ರ, ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ವಹಿಸಲು ಸಿಎಂ ಬಿಎಸ್‌ವೈ ಸೂಚನೆ

Update: 2021-06-25 16:16 GMT

ಬೆಂಗಳೂರು, ಜೂ. 25: `ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಡೆಲ್ಟಾ ವೈರಸ್ ಸೋಂಕಿನ ಬಗ್ಗೆ ತೀವ್ರ ವಹಿಸುವುದಲ್ಲದೆ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಬರುವವರ ಬಗ್ಗೆ ನಿವಾ ವಹಿಸಬೇಕು' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶುಕ್ರವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಡೆಲ್ಟಾ ವೈರಸ್ ಸದ್ಯ ಹತೋಟಿಯಲ್ಲಿದ್ದು ಈ ವೈರಸ್ ಬಗ್ಗೆ ತೀವ್ರ ನಿಗಾ ಇಡಲು ಸೂಚಿಸಲಾಯಿತು. ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಲ್ಟಾ ವೈರಸ್ ಕಂಡುಬರುತ್ತಿದೆ. ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಮಹಾರಾಷ್ಟ್ರ ಮತ್ತು ಕೇರಳದಿಂದ ಕರ್ನಾಟಕಕ್ಕೆ ಬರುವವರ ಬಗ್ಗೆ ತೀವ್ರ ನಿಗಾ ಇಟ್ಟು ಅವರನ್ನು ಕೊರೋನ ಟೆಸ್ಟ್ ಗೆ ಒಳಪಡಿಸಬೇಕು. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೆ ಅಲೆಯ ತೀವ್ರತೆ ಕಡಿಮೆಯಾಗದಿರುವ ಆತಂಕಕಾರಿ, ರಾಜ್ಯದಲ್ಲಿ ಕೋವಿಡ್ ಲಾಕ್‍ಡೌನ್ ನಿರ್ಬಂಧ ಸಡಿಲಿಗೊಳಿಸಿದರೂ ಎಚ್ಚರಿಕೆಯಿಂದ ಇರುವಂತೆ ರಾಜ್ಯದ ಜನರಿಗೆ ಮನವಿ ಮಾಡುತ್ತೇನೆ' ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಅಪೌಷ್ಟಿಕತೆಯಲ್ಲಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಪೌಷ್ಟಿಕ ಆಹಾರ ಒದಗಿ ವೈದ್ಯಕೀಯ ನಿಗಾ ವಹಿಸಬೇಕು. ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್ ಮತ್ತು ರೆಸಾರ್ಟ್‍ಗಳಲ್ಲಿ 40 ಜನಕ್ಕೆ ಸೀಮಿತಗೊಳಿಸಿ ಅನುಮತಿ ತೆಗೆದುಕೊಂಡು ವೈಯಕ್ತಿಕ ಪಾಸ್‍ಗಳೊಂದಿಗೆ ಸೋಮವಾರದಿಂದ ಜಾರಿಗೆ ಬರುವಂತೆ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News