ಮಗುವನ್ನು ಕೊಂದು ಕಾಫಿ ತೋಟದಲ್ಲಿ ಹೂತು ಹಾಕಿದ ಪೋಷಕರು: ಆರೋಪ
Update: 2021-06-26 22:32 IST
ಆಲೂರು, ಜೂ.26: ತಂದೆ-ತಾಯಿ ಇಬ್ಬರು ಸೇರಿ ಮಗುವೊಂದನ್ನು ಕೊಂದು ಶವವನ್ನು ಕಾಫಿ ತೋಟದಲ್ಲಿ ಹೂತಿದ್ದಾರೆನ್ನಲಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಕೆ ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆಂದು ಬಾಂಗ್ಲಾದೇಶದಿಂದ ತಾಲೂಕಿನ ಕೆ ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕೂಲಿ ಕಾರ್ಮಿಕರ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.
ಕೆಲ ದಿನಗಳ ಹಿಂದೆ ಪತಿ ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ ಪ್ರಾರಂಭವಾಗಿದೆ. ಈ ಸಂದರ್ಭ ಮಗುವನ್ನು ಹೊಡೆದು ಸಾಯಿಸಿ ಶವವನ್ನು ಹೂತು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಉಪವಿಭಾಗಾಧಿಕಾರಿ ಮಾರ್ಗದರ್ಶನದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಹೂತಿರುವ ಶವವನ್ನು ಹೊರ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.